ಅನೈತಿಕ ಪೊಲೀಸ್ ಗಿರಿ
ಹಾವೇರಿ: ಹಾನಗಲ್ ತಾಲ್ಲೂಕಿನ ನಾಲ್ಕರ ಕ್ರಾಸ್ ಬಳಿ ನಡೆದ ಎರಡು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳ ಬೆನ್ನಲ್ಲೇ, ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಬ್ಯಾಡಗಿ ತಾಲ್ಲೂಕಿನ ಅಗಸನಹಳ್ಳಿಗೆ ಹಬ್ಬಕ್ಕಾಗಿ ತನ್ನ ಜೊತೆ ಕೆಲಸ ಮಾಡುತ್ತಿದ್ದ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಬೈಕ್‌ನಲ್ಲಿ ತೆರಳಿದ್ದರು. ಮಾರ್ಗ ಮಧ್ಯೆ ಮಾತನಾಡುತ್ತಾ ನಿಂತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಮುಸ್ಲಿಂ ಯುವಕರ ಗುಂಪು, ಹಿಂದೂ ಯುವಕನ ಜೊತೆ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಕ್ಕೆ ಹೊಡೆದು ಎಳೆದಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ’ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.
‘ಘಟನೆಗೆ ಸಂಬಂಧಿಸಿದಂತೆ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, 7 ಆರೋಪಿಗಳನ್ನು ಬಂಧಿಸಿದ್ದೇವೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ತಂಡ ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.