ADVERTISEMENT

ಹಾವೇರಿ | ಬಾಂಗ್ಲಾ ಧ್ವಜದ ಚಿತ್ರ ಸುಟ್ಟು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 1:58 IST
Last Updated 6 ಜನವರಿ 2026, 1:58 IST
ಹಾವೇರಿಯ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮಸೇನೆಯ ಕಾರ್ಯಕರ್ತರು, ಬಾಂಗ್ಲಾದೇಶ ಧ್ವಜದ ಚಿತ್ರವನ್ನು ಸುಟ್ಟು ಹಾಕಿದರು
ಹಾವೇರಿಯ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮಸೇನೆಯ ಕಾರ್ಯಕರ್ತರು, ಬಾಂಗ್ಲಾದೇಶ ಧ್ವಜದ ಚಿತ್ರವನ್ನು ಸುಟ್ಟು ಹಾಕಿದರು   

ಹಾವೇರಿ: ‘ದೇಶದಲ್ಲಿ ಅಕ್ರಮವಾಗಿ ವಾಸವಿರುವ ಬಾಂಗ್ಲಾದೇಶದವರನ್ನು ಪತ್ತೆ ಮಾಡಿ ಗಡಿಪಾರು ಮಾಡಬೇಕು’ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮಸೇನೆಯ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದ ಬಳಿ ಸೇರಿದ್ದ ಕಾರ್ಯಕರ್ತರು, ಬಾಂಗ್ಲಾದೇಶ ಧ್ವಜದ ಚಿತ್ರವನ್ನು ಸುಟ್ಟು ಆಕ್ರೋಶ ಹೊರಹಾಕಿದರು.

‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಹಿಂದೂಗಳನ್ನು ಹುಡುಕಿ ಹತ್ಯೆ ಮಾಡಲಾಗುತ್ತಿದೆ. ಈ ಕೃತ್ಯವನ್ನು ಖಂಡಿಸುತ್ತೇವೆ. ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ, ಬಾಂಗ್ಲಾದಲ್ಲಿರುವ ಹಿಂದೂಗಳನ್ನು ರಕ್ಷಣೆ ಮಾಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ADVERTISEMENT

‘ದೇಶದೊಳಗೆ ಅಕ್ರಮವಾಗಿ ನುಸುಳಿರುವ ಬಾಂಗ್ಲಾದೇಶದವರು, ರಾಜ್ಯದ ಹಲವು ಕಡೆಗಳಲ್ಲಿ ನೆಲೆಸಿದ್ದಾರೆ. ಸ್ಥಳೀಯವಾಗಿ ಗುರುತಿನ ಚೀಟಿಗಳನ್ನು ಪಡೆದುಕೊಂಡಿದ್ದಾರೆ. ಅಂಥ ನುಸುಳುಕೋರರನ್ನು ಸರ್ಕಾರ ಪತ್ತೆ ಮಾಡಬೇಕು. ಅಕ್ರಮವಾಸಿಗಳನ್ನು ದೇಶದಿಂದ ಹೊರಗೆ ಹಾಕಬೇಕು. ಹಾವೇರಿ ಜಿಲ್ಲೆಯಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳಿದ್ದು, ಅವರನ್ನೂ ಪತ್ತೆ ಮಾಡಬೇಕು’ ಎಂದ ಆಗ್ರಹಿಸಿದರು.

ಜಿಲ್ಲಾಧಿಕಾರಿಗೆ ಮನವಿ: ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರ ಮೂಲಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಪ್ರತಿಭಟನಕಾರರು ಮನವಿ ರವಾನಿಸಿದರು.

ಶ್ರೀರಾಮ ಸೇನಾ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ವಿನಾಯಕ ಇಚ್ಚಂಗಿ, ಭಜರಂಗದಳದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ ನೂರೊಂದುಮಠ, ಸತ್ಯ ಪ್ರಮೋದಂದ್ರ ಸರಸ್ವತಿ ಸ್ವಾಮೀಜಿ, ಪರಶುರಾಮ್ ನಡುಮನಿ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ, ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ಮುತ್ತಣ್ಣ ಮುಸ್ತಿ, ಕಿರಣ ಕೊಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.