ಹಾವೇರಿ: ಜಿಲ್ಲೆಯ ಬ್ಯಾಡಗಿ ಬಸ್ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ವಾಕರಸಾಸಂ) ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರು, ಗಲೀಜು ಕಂಡು ಅಸಮಾಧಾನ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಿಂದ ಹಾವೇರಿ ಜಿಲ್ಲೆಗೆ ಶನಿವಾರ ಆಗಮಿಸಿದ್ದ ಪ್ರಿಯಾಂಗ ಅವರು ಬ್ಯಾಡಗಿ ಬಸ್ ಘಟಕ ಹಾಗೂ ಬಸ್ ನಿಲ್ದಾಣಗಳಲ್ಲಿ ಪರಿಶೀಲನೆ ನಡೆಸಿದರು. ಬ್ಯಾಡಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
‘ಬಸ್ ನಿಲ್ದಾಣ ಸ್ವಚ್ಛಗೊಳಿಸಬೇಕು. ನಿತ್ಯವೂ ಸ್ವಚ್ಛತೆ ಕಾಪಾಡಬೇಕು. ಬಸ್ ಕಾರ್ಯಾಚರಣೆ ಸುಧಾರಣೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾವೇರಿ ಕೇಂದ್ರ ಬಸ್ ನಿಲ್ದಾಣಕ್ಕೂ ಪ್ರಿಯಾಂಗ ಅವರು ಭೇಟಿ ನೀಡಿದರು. ಸಾರಿಗೆಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು. ಬಸ್‌ಗಳು ಹಾಗೂ ಪ್ರಯಾಣಿಕರ ದಟ್ಟಣೆಯನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಅಧ್ಯಯನ ಮಾಡಿ ಪ್ರಸ್ತಾವ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ, ಅಶೋಕ ಪಾಟೀಲ, ಕೆ.ಆರ್.ನಾಯಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.