ಪ್ರಾತಿನಿಧಿಕ ಚಿತ್ರ
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಆರಂಭವಾಗಿದ್ದು, ಮೊದಲ ದಿನ ನಾಲ್ಕು ನಾಮಪತ್ರ ಸಲ್ಲಿಕೆಯಾಗಿವೆ.
ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಅಭ್ಯರ್ಥಿ ರವಿ ಕೃಷ್ಣಾ ರೆಡ್ಡಿ ಹಾಗೂ ಸೋಷಿಯಲಿಸ್ಟ್ ಪಾರ್ಟಿಯ (ಇಂಡಿಯಾ) ಖಾಜಾಮೋಹಿದ್ದೀನ್ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಹಿಂದೂಸ್ಥಾನ್ ಜನತಾ ಪಕ್ಷದ ಅಭ್ಯರ್ಥಿ ಶಿವಕುಮಾರ ತಳವಾರ ಅವರು ಎರಡು ಉಮೇದುವಾರಿಕೆ ಸಲ್ಲಿಸಿದ್ದಾರೆ.
‘ಅಕ್ಟೋಬರ್ 25ರವರೆಗೆ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 30 ಕೊನೆಯ ದಿನ’ ಎಂದು ಚುನಾವಣಾಧಿಕಾರಿ ಮಹಮ್ಮದ್ ಖಿಜರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.