
ಪ್ರಜಾವಾಣಿ ವಾರ್ತೆ
ಹಾವೇರಿ: ಜಿಲ್ಲೆಯ ಶಿಗ್ಗಾವಿ ಬಳಿಯ ಅಂಬುಜಾ ಕಾರ್ಖಾನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾವೇರಿಯ ಕಾರ್ತಿಕ ಹೂಗಾರ ಹಾಗೂ ಅವರ ಪತ್ನಿ ಐಶ್ವರ್ಯ ಮೃತರು. ಇವರಿಬ್ಬರು ಫೆ. 13ರಂದು ಮದುವೆಯಾಗಿದ್ದರು. ಕೆಲಸ ನಿಮಿತ್ತ ಭಾನುವಾರ ನಸುಕಿನಲ್ಲಿ ಕಾರಿನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ.
ಅಪಘಾತದಿಂದಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನ ಮುಂದಿನ ಸೀಟಿನಲ್ಲಿ ಸಿಲುಕಿಕೊಂಡಿದ್ದ ದಂಪತಿಯ ಮೃತದೇಹವನ್ನು ಪೊಲೀಸರು ಹೊರಗೆ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.