ADVERTISEMENT

ಹಾವೇರಿ ಜಿಲ್ಲೆಯಲ್ಲಿ 288 ಮಂದಿ ಮೇಲೆ ನಿಗಾ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 12:45 IST
Last Updated 18 ಮಾರ್ಚ್ 2020, 12:45 IST

ಹಾವೇರಿ: ಕೊರೊನಾ ವೈರಸ್‌ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯಲ್ಲಿ 288 ಮಂದಿಯನ್ನು ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ (ಹೋಮ್‌ ಕ್ವಾರನ್‌ಟೈನ್‌) ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಜೇಂದ್ರ ದೊಡ್ಡಮನಿ ತಿಳಿಸಿದರು.

ವಿದೇಶದಿಂದ ಜಿಲ್ಲೆಗೆ ಇದುವರೆಗೆ ಒಟ್ಟು 32 ಮಂದಿ ಬಂದಿದ್ದು, ಎಲ್ಲರನ್ನೂ ತಪಾಸಣೆ ಮಾಡಲಾಗಿದೆ. 53 ಮಂದಿಗೆ ಪ್ರಾಥಮಿಕ ಹಂತದ ತಪಾಸಣೆ, 235 ಮಂದಿಗೆ ಎರಡನೇ ಹಂತದ ತಪಾಸಣೆ ಸೇರಿದಂತೆ ಇದುವರೆಗೂ ಒಟ್ಟು 288 ಮಂದಿಯನ್ನು ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮೂವರು ವ್ಯಕ್ತಿಗಳ ಗಂಟಲು ದ್ರವವನ್ನು ಶಿವಮೊಗ್ಗದ ವೈರಾಲಜಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಮೂರೂ ಪ್ರಕರಣಗಳು ನೆಗೆಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

ADVERTISEMENT

ಜಿಲ್ಲಾಡಳಿತದ ಸಹಾಯವಾಣಿ 08375-249102

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.