ADVERTISEMENT

ಹಾವೇರಿ | ಲಾಟರಿ- ಮಟ್ಕಾ ಹಾವಳಿ: ಕ್ರಮಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 15:50 IST
Last Updated 22 ಆಗಸ್ಟ್ 2024, 15:50 IST
ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಕುರಿತು ಹಾವೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು
ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಕುರಿತು ಹಾವೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು   

ಹಾವೇರಿ: ಜಿಲ್ಲೆಯಲ್ಲಿ ಲಾಟರಿ ಹಾಗೂ ಮಟ್ಕಾ ಹಾವಳಿ ಕಂಡು ಬಂದಲ್ಲಿ ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ 2024-25ನೇ ಸಾಲಿನ 1ನೇ ತ್ರೈಮಾಸಿಕ ಅವಧಿಗೆ ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಕುರಿತು ನಡೆಸಿದ ತ್ರೈಮಾಸಿಕ ಸಭೆಯಲ್ಲಿ ಅವರು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ವೈ. ಶಿರಕೋಳ, ವಾಣಿಜ್ಯ ತೆರಿಗೆ ಜಾರಿ ವಿಭಾಗದ ಅಧಿಕಾರಿ ನಾಗೇಶ ಕೆ. ಚೌಧರಿ, ಪಿಂಚಣಿ ಸಣ್ಣ ಉಳಿತಾಯ ಇಲಾಖೆ ಅಧಿಕಾರಿ ಸುರೇಶ ಎಸ್.ಎಂ. ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.