ಹಾವೇರಿ: ಇಲ್ಲಿಯ ಕೇಂದ್ರ ಬಸ್ ನಿಲ್ದಾಣದ ಕಾಂಪ್ಲೆಕ್ಸ್‌ನಲ್ಲಿರುವ ಎರಡು ಮಳಿಗೆಗಳಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಗೃಹೋಪಯೋಗಿ ವಸ್ತುಗಳು ಹಾಗೂ ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಲ್ದಾಣಕ್ಕೆ ಹೊಂದಿಕೊಂಡಂತೆ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಮಳಿಗೆಗಳನ್ನು ಬಾಡಿಗೆಗೆ ನೀಡಲಾಗಿದೆ. ಎರಡು ಮಳಿಗೆಗಳನ್ನು ಬಾಡಿಗೆ ಪಡೆದಿದ್ದ ವ್ಯಾಪಾರಿಯೊಬ್ಬರು, ಗೃಹೋಪಯೋಗಿ ವಸ್ತುಗಳು ಹಾಗೂ ಪೀಠೋಪಕರಣ ಮಾರುತ್ತಿದ್ದರು. ಇದೇ ಮಳಿಗೆಯಲ್ಲಿ ಭಾನುವಾರ ಸಂಜೆ 6.30 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಕೆಲ ನಿಮಿಷಗಳಲ್ಲಿ ಬೆಂಕಿ ಹೊತ್ತಿ ಉರಿಯುತ್ತಿತ್ತು.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಸುಟ್ಟು ಕರಕಲಾದ ವಸ್ತುಗಳನ್ನು ಹೊರಗೆ ಸಾಗಿಸಿದರು.
‘ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಸ್ಥಳದಲ್ಲಿ ದೊರೆತಿರುವ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲಿಸಿದ ಬಳಿಕವೇ ನಿಖರ ಕಾರಣ ತಿಳಿಯಲಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.