ADVERTISEMENT

ಹಾವೇರಿ: ದೇವಸ್ಥಾನ ದೀಪದ ಬೆಂಕಿ ತಗುಲಿ ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 16:15 IST
Last Updated 24 ಜೂನ್ 2025, 16:15 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಿಮ್ಮಾಪುರದ ಹನುಮಂತ ದೇವರ ದೇವಸ್ಥಾನದಲ್ಲಿ ದೀಪದ ಬೆಂಕಿ ತಗುಲಿ ತೀವ್ರ ಗಾಯಗೊಂಡಿದ್ದ ಬಾಲಕಿ ಕೀರ್ತಿ ಮಲ್ಲೇಶಪ್ಪ ಚವ್ಹಾಣ (5) ಎಂಬಾಕೆ ಹುಬ್ಬಳ್ಳಿಯ ಕೆಎಂಸಿ–ಆರ್‌ಐ (ಕಿಮ್ಸ್) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

‘ತಿಮ್ಮಾಪುರದ ನಿವಾಸಿ ಕೀರ್ತಿ ಸಾವಿನ ಬಗ್ಗೆ ತಾಯಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ತಡಸ ಠಾಣೆ ಪೊಲೀಸರು ತಿಳಿಸಿದರು.

ADVERTISEMENT

‘ಬಾಲಕಿ ಕೀರ್ತಿ ಮೇ 3ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿದ್ದರು. ದೀಪದ ಬೆಂಕಿ ಆಕೆಯ ಬಟ್ಟೆಗೆ ತಗುಲಿತ್ತು. ಕಾಲು, ಹೊಟ್ಟೆ, ಬೆನ್ನಿನ ಮೇಲೆ ಗಾಯಗಳಾಗಿದ್ದವು. ಅವಳನ್ನು ಕೆಎಂಸಿ–ಆರ್‌ಐ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಯೇ ಜೂನ್ 23ರಂದು ತೀರಿಕೊಂಡಿದ್ದಾಳೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.