ADVERTISEMENT

ಹಾವೇರಿ | ಉಪನ್ಯಾಸಕರ ನೇಮಕ ವಿಳಂಬ: ಪ್ರತಿಭಟನೆ

ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 6:21 IST
Last Updated 13 ಸೆಪ್ಟೆಂಬರ್ 2025, 6:21 IST
<div class="paragraphs"><p>ಹಾವೇರಿ ತಾಲ್ಲೂಕಿನ ಗಾಂಧಿಪುರದಲ್ಲಿರುವ ಪದವಿ ಕಾಲೇಜು ಎದುರು ಗುರುವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು</p></div>

ಹಾವೇರಿ ತಾಲ್ಲೂಕಿನ ಗಾಂಧಿಪುರದಲ್ಲಿರುವ ಪದವಿ ಕಾಲೇಜು ಎದುರು ಗುರುವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು

ಹಾವೇರಿ: ‘ರಾಜ್ಯದ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ವಿಳಂಬವಾಗಿದ್ದು, ಇದರಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ’ ಎಂದು ಆರೋಪಿಸಿ ವಿದ್ಯಾರ್ಥಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಸೇರಿದ್ದ ವಿದ್ಯಾರ್ಥಿಗಳು, ‘ಶಿಕ್ಷಣವನ್ನು ಅತಂತ್ರಕ್ಕೆ ತಳ್ಳಿರುವ ಸರ್ಕಾರಕ್ಕೆ ಧಿಕ್ಕಾರ’, ‘ಅತಿಥಿ ಉಪನ್ಯಾಸಕರ ವಿಚಾರದಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಿ’, ‘ಶೈಕ್ಷಣಿಕ ಗುಣಮಟ್ಟ ಸುಧಾರಿಸಿ’ ಸೇರಿದಂತೆ ಹಲವು ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ADVERTISEMENT

‘ರಾಜ್ಯದಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ಒಂದೂವರೆ ತಿಂಗಳಾಗಿದೆ. ಇದುವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ನೇಮಕ ವಿಳಂಬ ಆಗಿರುವುದರಿಂದ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ. ಇದರಿಂದಾಗಿ ನಮ್ಮ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಉಂಟಾಗುತ್ತಿದೆ’ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

‘ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದೆ. ಆದರೆ, ಇದುವರೆಗೂ ಹಲವು ವಿಷಯಗಳ ಪಾಠಗಳು ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ನ್ಯಾಯಾಲಯದಲ್ಲಿರುವ ಮೊಕದ್ದಮೆ ಕಾರಣದಿಂದಾಗಿ ಅತಿಥಿ ಉಪನ್ಯಾಸಕರ ನೇಮಕದಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರ್ಕಾರ ಆದಷ್ಟು ಬೇಗ ಬಗೆಹರಿಸಿ, ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕಿ ಪೂಜಾ ನಂದಿಹಳ್ಳಿ ಪ್ರತಿಭಟನೆಯಲ್ಲಿ ಇದ್ದರು.‘ರಾಜ್ಯದ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ವಿಳಂಬವಾಗಿದ್ದು, ಇದರಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ’ ಎಂದು ಆರೋಪಿಸಿ ವಿದ್ಯಾರ್ಥಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ಸೇರಿದ್ದ ವಿದ್ಯಾರ್ಥಿಗಳು, ‘ಶಿಕ್ಷಣವನ್ನು ಅತಂತ್ರಕ್ಕೆ ತಳ್ಳಿರುವ ಸರ್ಕಾರಕ್ಕೆ ಧಿಕ್ಕಾರ’, ‘ಅತಿಥಿ ಉಪನ್ಯಾಸಕರ ವಿಚಾರದಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಿ’, ‘ಶೈಕ್ಷಣಿಕ ಗುಣಮಟ್ಟ ಸುಧಾರಿಸಿ’ ಸೇರಿದಂತೆ ಹಲವು ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

‘ರಾಜ್ಯದಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ಒಂದೂವರೆ ತಿಂಗಳಾಗಿದೆ. ಇದುವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ನೇಮಕ ವಿಳಂಬ ಆಗಿರುವುದರಿಂದ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ. ಇದರಿಂದಾಗಿ ನಮ್ಮ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಉಂಟಾಗುತ್ತಿದೆ’ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

‘ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದೆ. ಆದರೆ, ಇದುವರೆಗೂ ಹಲವು ವಿಷಯಗಳ ಪಾಠಗಳು ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ನ್ಯಾಯಾಲಯದಲ್ಲಿರುವ ಮೊಕದ್ದಮೆ ಕಾರಣದಿಂದಾಗಿ ಅತಿಥಿ ಉಪನ್ಯಾಸಕರ ನೇಮಕದಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರ್ಕಾರ ಆದಷ್ಟು ಬೇಗ ಬಗೆಹರಿಸಿ, ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕಿ ಪೂಜಾ ನಂದಿಹಳ್ಳಿ ಪ್ರತಿಭಟನೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.