ADVERTISEMENT

ಹಾವೇರಿ | ಹೆದ್ದಾರಿಯಲ್ಲಿ ಅಪಘಾತ: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 0:22 IST
Last Updated 17 ಅಕ್ಟೋಬರ್ 2025, 0:22 IST
   

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕಾಕೋಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನ ಚಮನಸಾಬ್ ಕೆರಿಮತ್ತಿಹಳ್ಳಿ (65), ಮಾಬುಸಾಬ್ ದೊಡ್ಡಗುಬ್ಬಿ (65) ಹಾಗೂ ನಿಂಗಮ್ಮ ಜಿಗಳೇರ್ (70) ಮೃತರು. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ರಾಣೆಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಹೆದ್ದಾರಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ನ ಟೇಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಮೃತರು ಹಾಗೂ ಗಾಯಾಳುಗಳು, ಸಂಬಂಧಿಕರೊಬ್ಬರ ಮದುವೆಯ ಮೆರವಣಿಗೆಗಾಗಿ ಟಾಟಾ ಏಸ್‌ ವಾಹನದಲ್ಲಿ ಹೋಗಿದ್ದರು. ಮೆರವಣಿಗೆ ಮುಗಿಸಿಕೊಂಡು ವಾಪಸು ತಮ್ಮೂರಿಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.