ಹಾವೇರಿ: ತಾಲ್ಲೂಕಿನ ಕನವಳ್ಳಿ ಗ್ರಾಮದ ವಡ್ಡರ ಓಣಿಯಲ್ಲಿರುವ ಆಲದಮ್ಮ ಹಾಗೂ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಬೆಳಿಗ್ಗೆ ರುದ್ರಾಭಿಷೇಕ ಹಾಗೂ ಉಡಿ ತುಂಬುವ ಕಾರ್ಯಕ್ರಮ ಜರುಗಿತು. ಸಂಜೆಯಿಂದ ರಾತ್ರಿಯವರೆಗೂ ದೇವಿ ಮೂರ್ತಿಗಳ ಮೆರವಣಿಗೆ ನಡೆಯಿತು. ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಆರ್ಕೇಸ್ಟ್ರಾ ಹಾಗೂ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಗ್ರಾಮದ ಜನರು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಮೆರವಣಿಗೆ ಬಳಿಕ ದೇವಿ ಮೂರ್ತಿಗಳನ್ನು ಪುನಃ ದೇವಸ್ಥಾನಕ್ಕೆ ತಂದು ಪ್ರತಿಷ್ಠಾಪಿಸಲಾಯಿತು.
ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಜಾತ್ರೆ ಜರುಗುತ್ತಿದೆ. ಬುಧವಾರ ಹರಕೆ ಹಾಗೂ ಮುಡುಪು ಸಲ್ಲಿಸುವ ಕಾರ್ಯಕ್ರಮವಿದೆ. ಏಪ್ರಿಲ್ 17ರಂದು ಗ್ರಾಮದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. 18ರಂದು ದೇವಿಯವರ ಧಾರ್ಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.