ADVERTISEMENT

ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 7:26 IST
Last Updated 19 ಜನವರಿ 2026, 7:26 IST
<div class="paragraphs"><p>ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯನ್ನು ಶಿಗ್ಗಾಂವಿಯಲ್ಲಿ ಶನಿವಾರ ಶಾಸಕ ಯಾಸೀರಖಾನ್ ಪಠಾಣ ಬಿಡುಗಡೆಗೊಳಿಸಿದರು&nbsp;</p></div>

ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯನ್ನು ಶಿಗ್ಗಾಂವಿಯಲ್ಲಿ ಶನಿವಾರ ಶಾಸಕ ಯಾಸೀರಖಾನ್ ಪಠಾಣ ಬಿಡುಗಡೆಗೊಳಿಸಿದರು 

   

ಸವಣೂರು: ಪಟ್ಟಣದಲ್ಲಿ ಜ. 24 ಹಾಗೂ 25ರಂದು ಹಮ್ಮಿಕೊಂಡಿರುವ ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರವದ ಸಕಲ ಸಿದ್ಧತೆ ನಡೆಸಲಾಗಿದೆ’ ಎಂದು ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.

ಶಿಗ್ಗಾಂವಿ ಪಟ್ಟಣದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಕನ್ನಡ ಮನಸ್ಸುಗಳು ಒಂದಾಗಿ ತಾಯಿ ಭುವನೇಶ್ವರಿ ರಥ ಎಳೆಯಲು ಸಿದ್ದರಾಗಬೇಕು’ ಎಂದರು.

ADVERTISEMENT

ಕಸಾಪ ಜಿಲ್ಲಾ ಕಾರ್ಯದರ್ಶಿ ಪ್ರಭು ಅರಗೋಳ ಅವರು, ಸಮ್ಮೇಳನದಲ್ಲಿ ಹಮ್ಮಿಕೊಂಡಿರುವ ವಿವಿಧ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸನ್ಮಾನ ಕುರಿತು ವಿವರಿಸಿದರು.

ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಸಿ.ಎನ್. ಪಾಟೀಲ ಮಾತನಾಡಿದರು. ಮುಖಂಡರಾದ ಎಂ.ಜೆ. ಮುಲ್ಲಾ, ಗುಡ್ಡಪ್ಪ ಜಲದಿ, ಮಹೇಶ ಅಪ್ಪಣ್ಣನವರ, ಮೌಲಾಸಾಬ್ ಹೊಂಬರಡಿ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.