ADVERTISEMENT

ಕುಪ್ಮ ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 2:41 IST
Last Updated 7 ನವೆಂಬರ್ 2025, 2:41 IST
   

ಹಾವೇರಿ: ಇಲ್ಲಿಯ ಹಾನಗಲ್ ರಸ್ತೆಯಲ್ಲಿರುವ ಶಿವಾ ಕನ್ವೆನ್ಷನ್ ಹಾಲ್‌ನಲ್ಲಿ ನ. 8ರಂದು ಕರ್ನಾಟಕ ಅನುದಾನಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ (ಕುಪ್ಮ) ಸಮಾವೇಶ ಜರುಗಲಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕುಪ್ಮ ರಾಜ್ಯ ಘಟಕದ ಅಧ್ಯಕ್ಷ ಎಂ. ಮೋಹನ ಆಳ್ವ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಹಾವೇರಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ ಶಾಸ್ತ್ರಿ, ಕುಪ್ಮ ರಾಜ್ಯ ಸಮಿತಿಯ ಜಂಟಿ ಕಾರ್ಯದರ್ಶಿ ವಿಶ್ವನಾಥ ಶೇಷಾಚಲ, ರಾಜ್ಯ ಸಮಿತಿಯ ಸದಸ್ಯರಾದ ನಾಗರಾಜ ಶೆಟ್ಟಿ, ಕುಪ್ಮ ಜಿಲ್ಲಾ ಘಟಕದ ಗೌರವಾಧ್ಯಕ್ಷ ಆರ್.ಎಸ್. ಎಲಿ, ಕಾರ್ಯದರ್ಶಿ ಪ್ರಕಾಶ ನಾಯ್ಕ ಭಾಗವಹಿಸಲಿದ್ದಾರೆ.

ಕುಪ್ಮ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸತೀಶ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಎನ್.ಕೆ. ವಿಜಯನ್ ಕರಿಪ್ಪಾಲ್ ಮತ್ತು ಆದರ್ಶ ಗೋಖಲೆ ಅವರು ಉಪನ್ಯಾಸ ನೀಡಲಿದ್ದಾರೆ.

ADVERTISEMENT

‘ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುವ ಉಪನ್ಯಾಸಕರನ್ನು ಸರ್ಕಾರ ಕಡೆಗಣಿಸುತ್ತಿದೆ. ಆದರೆ, ಖಾಸಗಿ ಕಾಲೇಜು ಉಪನ್ಯಾಸಕರು ಸಹ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂಥ ಸಾಧಕ ಉಪನ್ಯಾಸಕರಿಗೆ ಸಮಾವೇಶದಲ್ಲಿ ‘ಕುಪ್ಮ ಅತ್ಯುತ್ತಮ ಶಿಕ್ಷಕ–2025’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು’ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.