ADVERTISEMENT

ಬಾಲಕಿ ಗರ್ಭಿಣಿ: ಪೋಕ್ಸೊ ಪ್ರಕರಣ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 7:13 IST
Last Updated 29 ಜನವರಿ 2026, 7:13 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಬ್ಯಾಡಗಿ: ಬಾಲಕಿಯನ್ನು ಪುಸಲಾಯಿಸಿ ಗೋವಾಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ  ಮಹಮ್ಮದಜಾಫರ್‌ ಗೂಡುಸಾಬ ಬಡೇಸಾಬನರ (23) ಎಂಬಾತನ ವಿರುದ್ಧ ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿ ಇತ್ತೀಚೆಗೆ ಗರ್ಭಿಣಿ ಎಂಬುದು ಗೊತ್ತಾಗಿತ್ತು. ಅವಾಗಲೇ ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಎಫ್‌ಐಆರ್ ಆಗಿದೆ.

ADVERTISEMENT

‘ಹಾವೇರಿಯ ನಾಗೇಂದ್ರನಮಟ್ಟಿಯ ನಿವಾಸಿ ಮಹಮ್ಮದಜಾಫರ್‌ ಗೂಡುಸಾಬ ಬಡೇಸಾಬನರ, ಬಾಲಕಿಯನ್ನು ಗೋವಾದ ಪಣಜಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿಯೇ ಬಾಡಿಗೆ ಮನೆಯೊಂದರಲ್ಲಿ ಸೆ. 18ರಂದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ದೂರಿನಲ್ಲಿ ಪೋಷಕರು ಆರೋಪಿಸಿದ್ದಾರೆ’ ಎಂದು ಪೊಲೀಸರು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.