ADVERTISEMENT

ನಾಟಕ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2025, 13:47 IST
Last Updated 25 ಜನವರಿ 2025, 13:47 IST

ರಂಗಗ್ರಾಮ ಖ್ಯಾತಿಯ ಹಾನಗಲ್ ತಾಲ್ಲೂಕಿನ ಶೇಷಗಿರಿಯ ಸಿ.ಎಂ.ಉದಾಸಿ ಕಲಾಕ್ಷೇತ್ರದಲ್ಲಿ ಜ.27 ರಂದು ಸಂಜೆ 7 ಗಂಟೆಗೆ ನಿರ್ದಿಗಂತ ತಂಡದಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

ಗಜಾನನ ಯುವಕ ಮಂಡಳದ ಆಶ್ರಯದಲ್ಲಿ ಆಯೋಜಿಸಿರುವ ಪ್ರದರ್ಶನವನ್ನು ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ.ಭಾಸ್ಕರ್ ಉದ್ಘಾಟಿಸಲಿದ್ದು, ನಿವೃತ್ತ ಪ್ರಾಚಾರ್ಯ ಎಂ.ಆರ್.ಹೆಗಡೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ.ಸಿ.ಟಿ.ಗುರುಪ್ರಸಾದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಮಲ್ಲಿಕಾರ್ಜುನ ಮಾನ್ಪಡೆ, ಪ್ರೊ.ಶಹಜಾನ್ ಮುದಕವಿ, ಡಾ.ಚಂದ್ರಪ್ಪ ಸೊಬಟಿ ಭಾಗವಹಿಸುವರು.

ಬಳಿಕ ಶಕೀಲ್ ಅಹ್ಮದ್ ನಿರ್ದೇಶನದ ತಿಂಡಿಗೆ ಬಂದ ತುಂಡೇರಾಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.