ಸವಣೂರು: ಜ. 28 ರಂದು ಪಟ್ಟಣದಲ್ಲಿ ಏರ್ಪಡಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಮನೋರಂಜನೆಗೆ ಸಿಮೀತಗೊಳಿಸುವ ಬದಲಾಗಿ ಕನ್ನಡ ಭಾಷೆಯ ಉಳುವಿಗಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಕಲ್ಮಠದ ಮಹಾಂತ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಲಲಾಟೇಶ್ವರ ಕಲ್ಮಠದಲ್ಲಿ ಏರ್ಪಡಿಸಿದ್ದ ಸವಣೂರು ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಯೋಗಿ ಆಲದಕಟ್ಟಿ ಮಾತನಾಡಿದರು. ಸಮ್ಮೇಳನ ಅಧ್ಯಕ್ಷ ಮಲ್ಲಾರಪ್ಪ ತಳ್ಳಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನ ಕಾರ್ಯಾಧ್ಯಕ್ಷ ರಮೇಶ ಅರಗೋಳ, ಉಪಾಧ್ಯಕ್ಷ ಎಂ.ಜೆ.ಮುಲ್ಲಾ, ಮೋದಿನ ಹಣಗಿ, ಕೋಶಾಧ್ಯಕ್ಷ ಸುಭಾಸ ಮಜ್ಜಗಿ, ಪದಾಧಿಕಾರಿಗಳಾದ ಪ್ರವೀಣ ಚರಂತಿಮಠ, ಡಾ.ಗುರುಮಹಾಂತಯ್ಯ ಆರಾಧ್ಯಮಠ, ಉಮೇಶ ದಾಮೋದರ, ಶ್ರೀನಿವಾಸ ಖಾರದ, ಪರಶುರಾಮ ಈಳಗೇರ, ಬಸನಗೌಡ ಪಾಟೀಲ, ರವಿ ಕರಿಗಾರ, ರೇಖಾ ಕಣೇಕಲ್, ಸುನಂದಾ ಚಿನ್ನಾಪೂರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.