ರಟ್ಟೀಹಳ್ಳಿ: ಪಟ್ಟಣದಲ್ಲಿ ಭಾನುವಾರ ಅಯೋಧ್ಯಾ ಶ್ರೀರಾಮ ಮಂದಿರ ಪ್ರತಿಷ್ಠಾನಗೊಂಡು ಒಂದು ವರ್ಷ ಪೂರೈಸಿದ ಸಂದರ್ಭದ ಅಂಗವಾಗಿ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮದ ಶ್ರೀರಾಮ ಭಕ್ತರ ತಂಡದಿಂದ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ.
ಜ.26ರಂದು ಬೆಳಿಗ್ಗೆ ಪಟ್ಟಣದ ಕೆ.ಇ.ಬಿ. ಆಂಜನೇಯ ದೇವಸ್ಥಾನದಿಂದ ಶ್ರೀರಾಮ ಭಜನೆ ಪ್ರಾರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದ್ದು, ಸಂಜೆ 5 ಗಂಟೆಗೆ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ವೇಷಭೂಷಣ ಕಾರ್ಯಕ್ರಮ ಮತ್ತು ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸದಭಕ್ತರು ಹೆಚ್ಚಿನ ಸಂಖ್ಯೆ ಪಾಲ್ಗೊಳ್ಳುವಂತೆ ಶ್ರೀರಾಮ ಭಕ್ತ ತಂಡದ ರಾಜು ವರ್ಣೇಕರ, ಹಾಗೂ ಸುಶೀಲ ನಾಡಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.