ADVERTISEMENT

ಒಂಬತ್ತು ತಿಂಗಳ ಮಗುವಿಗೂ ಸೋಂಕು

ಜಿಲ್ಲೆಯಲ್ಲಿ 56ಕ್ಕೇರಿದ ಕೋವಿಡ್ ಪ್ರಕರಣ: 25 ಗುಣಮುಖ, 31 ಸಕ್ರಿಯ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 16:47 IST
Last Updated 27 ಜೂನ್ 2020, 16:47 IST
ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ 
ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ    

ಹಾವೇರಿ: ಜಿಲ್ಲೆಯಲ್ಲಿ ಶನಿವಾರ ಒಂಬತ್ತು ತಿಂಗಳ ಗಂಡು ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ 56 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ 25 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 31 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಒಂಬತ್ತು ತಿಂಗಳ ಗಂಡುಮಗು (ಪಿ-56 ) ತನ್ನ ತಂದೆ-ತಾಯಿಯೊಂದಿಗೆ ಸವಣೂರ ಪಟ್ಟಣದ ಖಾದರಭಾಗ ಓಣಿಯಲ್ಲಿ ವಾಸವಿತ್ತು. ಈಗಾಗಲೇ ಪಿ-8699 ಸೋಂಕಿತ ವ್ಯಕ್ತಿಯ ಕಾರಣ ಈ ಪ್ರದೇಶವನ್ನು ‘ಕಂಟೈನ್‍ಮೆಂಟ್ ಜೋನ್’ ಎಂದು ಘೋಷಿಸಲಾಗಿತ್ತು.

ಜೂನ್ 23ರಂದು ಕಂಟೈನ್‍ಮೆಂಟ್ ಜೋನ್‍ನಲ್ಲಿ ಆರೋಗ್ಯ ತಪಾಸಣೆ ವೇಳೆ ಮಗುವಿನ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶನಿವಾರ ಕೋವಿಡ್ ಪಾಸಿಟಿವ್ ಎಂದು ವರದಿ ಬಂದ ಕೂಡಲೇ ಮಗುವನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.