ಅರ್ಜಿ ಆಹ್ವಾನ
ಹಾವೇರಿ: ನೊಳಂಬ ಲಿಂಗಾಯತ ಸಂಘ ಉಪಸಮಿತಿ ವತಿಯಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
‘2025ರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದವರು ಅರ್ಜಿ ಸಲ್ಲಿಸಬಹುದು. ಹಾವೇರಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ಧಾರವಾಡ ಜಿಲ್ಲೆಯ ಸಮಾಜದ ವಿದ್ಯಾರ್ಥಿಗಳು ಪುರಸ್ಕಾರ ಪಡೆಯಬಹುದು. ಸ್ವ–ವಿವರ, ಫೋಟೊ, ಆಧಾರ್ ಹಾಗೂ ಅಂಕಪಟ್ಟಿ ನಕಲು ಪ್ರತಿಯೊಂದಿಗೆ ಜೂನ್ 15ರೊಳಗಾಗಿ ಅರ್ಜಿ ಸಲ್ಲಿಸಬಹುದು’ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
‘ಭರ್ತಿ ಮಾಡಿದ ಅರ್ಜಿಯನ್ನು ‘ಅಧ್ಯಕ್ಷರು, ನೊಳಂಬ ಲಿಂಗಾಯತ ಸಂಘದ ಉಪಸಮಿತಿ, ಹಾವೇರಿ, ನಂದಿಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಹತ್ತಿರ, ಕಲ್ಲುಮಂಟಪ ರಸ್ತೆ, ಹಾವೇರಿ’ ಇವರಿಗೆ ಕಳುಹಿಸಬೇಕು. ಮಾಹಿತಿಗೆ ಮೊಬೈಲ್ ಸಂಖ್ಯೆ; 8050868273, 9448966100 ಸಂಪರ್ಕಿಸಬಹುದು. ಹಾವೇರಿಯ ಗುರು ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಜೂನ್ 22ರಂದು ಬೆಳಿಗ್ಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲು ಯೋಜಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.