ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. 6 ಮಂದಿ ತೀವ್ರ ಗಾಯಗೊಂಡಿದ್ದಾರೆ.
ಅರ್ನವಿ (11) ಹಾಗೂ ಯಶ್ (20) ಮೃತರು. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆಗೆ ಖಾಸಗಿ ಬಸ್ ಹೊರಟಿತ್ತು. ಮೊಟೇಬೆನ್ನೂರು ಗ್ರಾಮದ ಬಳಿ ಬಸ್‌ಗೆ ಕಾರು ಅಡ್ಡಬಂದಿತ್ತು. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ಚಾಲಕ ದಿಢೀರ್ ಬ್ರೇಕ್ ಹಾಕಿದ್ದ. ಅದರಿಂದಾಗಿ ಬಸ್, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಬಸ್ ಭಾಗಶಃ ಜಖಂಗೊಂಡಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.