ಹಾವೇರಿ: ಜಿಲ್ಲೆಯಾದ್ಯಂತ ನಿರಂತರವಾಗಿ ಜೋರು ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲ ಶಾಲೆ–ಕಾಲೇಜು, ಅಂಗನವಾಡಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಆ. 20ರಂದು ರಜೆ ಘೋಷಿಸಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ, ‘ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಕ್ಕಳು ಶಾಲೆಗೆ ಹೋಗಿ ಬರಲು ತೊಂದರೆ ಆಗುತ್ತಿದೆ’ ಎಂದಿದ್ದಾರೆ.
‘ಮಕ್ಕಳ ಆರೋಗ್ಯದ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲೆಯ ಎಲ್ಲ ಶಾಲೆ–ಕಾಲೇಜು, ಅಂಗನವಾಡಿ, ಶೈಕ್ಷಣಿಕ ಸಂಸ್ಥೆಗಳಿಗೆ ಆಗಸ್ಟ್ 20ರಂದು ಒಂದು ದಿನ ರಜೆ ಘೋಷಿಸಲಾಗಿದೆ. ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದೆ. ಈ ರಜೆ ದಿನವನ್ನು ಸಾರ್ವಜನಿಕ ರಜೆ ದಿನದಂದು ಹೆಚ್ಚುವರಿ ತರಗತಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳುವಂತೆಯೂ ತಿಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.