
ಹಾವೇರಿ: ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸಿಡಿದೆದಿದ್ದ ಕಿತ್ತೂರಿನ ವೀರರಾಣಿ ಚನ್ನಮ್ಮ ಅವರ ಜಯಂತಿಯನ್ನು ಜಿಲ್ಲೆಯಾದ್ಯಂತ ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ರಾಣಿ ಚನ್ನಮ್ಮ ವೃತ್ತ ಹಾಗೂ ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಿತ್ತೂರು ಚನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು ಹಾಗೂ ಮುಖಂಡರು, ಚನ್ನಮ್ಮ ಅವರ ಹೋರಾಟವನ್ನು ಮೆಲುಕು ಹಾಕಿದರು.
ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮಿಸಿದರು.
ಹರಿಹರ ಪಂಚಮಸಾಲಿ ಪೀಠದ ಧರ್ಮದರ್ಶಿ ಪಿ.ಡಿ. ಶಿರೂರ, ಪಂಚಮಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಶಂಕರ ಬಿಸರಳ್ಳಿ, ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಅಗಡಿ, ಸಂತೋಷ ಕೊಟ್ರಪ್ಪನವರ, ಮಾಜಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ, ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ಎಸ್‌ಪಿ ಯಶೋಧಾ ವಂಟಗೋಡಿ, ಎಎಸ್‌ಪಿ ಲಕ್ಷ್ಮಣ ಶಿರಕೋಳ, ಮುಖಂಡರಾದ ಮಲ್ಲಿಕಾರ್ಜುನ ಹಾವೇರಿ, ಕೊಟ್ರೇಶಪ್ಪ ಬಸೇಗಣ್ಣಿ, ಬಸವರಾಜ ಅರಬಗೊಂಡ, ಪ್ರಭು ಬಿಷ್ಟನಗೌಡ್ರ, ಬಸವರಾಜ ವೀರಾಪುರ, ಪರಮೇಶಪ್ಪ ಮೇಗಳಮನಿ, ಚನ್ನಮ್ಮ ಬ್ಯಾಡಗಿ, ಜಗದೀಶ ಕನವಳ್ಳಿ, ಭುವನೇಶ್ವರ ಶಿಡ್ಲಾಪುರ, ದಾನೇಶಪ್ಪ ಕೆಂಗೊಂಡ, ಹೊಳಿಯಪ್ಪ ಸೂರದ, ಸದಾನಂದ ಹಾದಿಮನಿ, ನಂಜುಂಡೇಶ ಕಳ್ಳೇರ, ಲಲಿತಾ ಗುಂಡೇನಹಳ್ಳಿ, ಮಮತಾ ಜಾಬಿನ, ಚಂಪಾ ಹುಣಸಿಕಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.