ADVERTISEMENT

ಹಾವೇರಿ | ಜೂನ್‌ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 13:42 IST
Last Updated 19 ಜೂನ್ 2020, 13:42 IST
ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ
ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ   

ಹಾವೇರಿ: ಜಿಲ್ಲೆಯಲ್ಲಿ ಜೂನ್ 25ರಿಂದ ಜುಲೈ 3ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಜರುಗಲಿದ್ದು, ಸುಗಮ ಹಾಗೂ ಸುವ್ಯವಸ್ಥಿತ ಪರೀಕ್ಷೆ ನಡೆಸಲು 75 ಪರೀಕ್ಷಾ ಕೇಂದ್ರಗಳು ಹಾಗೂ 15 ಬ್ಲಾಕ್ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ಸುರಕ್ಷತಾ ಮಾನದಂಡದೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶ ನಿಷೇಧಸಲಾಗಿದೆ. ಈ ಪ್ರದೇಶದಲ್ಲಿನ ಜೆರಾಕ್ಸ್ ಮತ್ತು ಟೈಪಿಂಗ್ ಸೆಂಟರ್‌ಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಆದೇಶಿಸಲಾಗಿದೆ ಹಾಗೂ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಸದರಿ ಆದೇಶವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.