ಹುಬ್ಬಳ್ಳಿ: ಹಾವೇರಿಯಿಂದ ಗುಜರಾತ್‌ಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 400 ಕ್ವಿಂಟಲ್ ಪಡಿತರ ಅಕ್ಕಿಯನ್ನು ಇಲ್ಲಿನ ಗಬ್ಬೂರು ಬೈಪಾಸ್ ಬಳಿ ಬುಧವಾರ ವಶಪಡಿಸಿಕೊಳ್ಳಲಾಗಿದೆ.
ಅಂದಾಜು ₹ 20 ಲಕ್ಷ ಮೌಲ್ಯದ ಅಕ್ಕಿ ಇದಾಗಿದ್ದು, ಖಚಿತ ಮಾಹಿತಿ ಮೇರೆಗೆ ಕಸಬಾ ಠಾಣೆ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ಕಿ ಜಪ್ತಿ ಮಾಡಿದ್ದಾರೆ.
ಹಾವೇರಿಯ ಶಿವಾ ಟ್ರೇಡರ್ಸ್‌ಗೆ ಸೇರಿದ ಲಾರಿ ಇದಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.