ಹಾವೇರಿ: ಬುದ್ಧ ಪೂರ್ಣಿಮಾ ನಿಮಿತ್ತ ಮೇ 12ರಂದು ಹಾವೇರಿ ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮೀನು–ಇತರೆ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಪ್ರಕಟಣೆ ನೀಡಿರುವ ನಗರಸಭೆ ಪೌರಾಯುಕ್ತ ಗಂಗಾಧರ ಬೆಲ್ಲದ, ‘ಮೇ 12ರಂದು ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಲು ತಿಳಿಸಲಾಗಿದೆ. ತಪ್ಪಿದಲ್ಲಿ ಅಂತಹ ಅಂಗಡಿಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.