ADVERTISEMENT

ಎಚ್‌.ಡಿ. ಕುಮಾರಸ್ವಾಮಿ ಸಿಎಂ ಆಗುವುದು ಹಗಲುಗನಸು: ಕೃಷಿ ಸಚಿವ ಬಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 13:00 IST
Last Updated 11 ಜನವರಿ 2021, 13:00 IST
ಕೃಷಿ ಸಚಿವ ಬಿ.ಸಿ.ಪಾಟೀಲ
ಕೃಷಿ ಸಚಿವ ಬಿ.ಸಿ.ಪಾಟೀಲ   

ಹಾವೇರಿ: ‘2023ರಲ್ಲಿ ಮುಖ್ಯಮಂತ್ರಿಯಾಗುತ್ತೇನೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹಗಲುಗನಸು ಕಾಣುತ್ತಿದ್ದಾರೆ. 37 ಸ್ಥಾನಗಳನ್ನು ಇಟ್ಟುಕೊಂಡು ಮುಖ್ಯಮಂತ್ರಿಯಾದ ಅವರು ಅಧಿಕಾರವನ್ನು ಸರಿಯಾಗಿ ನಿಭಾಯಿಸೋಕೆ ಆಗಲಿಲ್ಲ. ಬಂದ ಭಾಗ್ಯವನ್ನು ಕಾಲಿನಿಂದ ಒದ್ದಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಟೀಕಿಸಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘2023ರಲ್ಲಿ ಬಿಜೆಪಿ ಪಕ್ಷ 150 ಸ್ಥಾನಗಳನ್ನ ಗೆದ್ದು ನಿಚ್ಚಳ ಬಹುಮತದಿಂದ ಮತ್ತೆ ಸರ್ಕಾರ ಮಾಡುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದರು.

ಕಾಂಗ್ರೆಸ್‌ನವರು ಕೃಷಿ ಕಾಯ್ದೆ ತಿದ್ದುಪಡಿ ವಿರುದ್ಧ ಜೈಲ್‌ಭರೋ ಚಳವಳಿ ನಡೆಸುತ್ತಾರಂತೆ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ಕೃಷಿ ಕಾಯ್ದೆಗಳು ರೈತರ ಪರವಾಗಿವೆ. ಅವುಗಳನ್ನು ವಿರೋಧ ಮಾಡುತ್ತಾರೆ ಎಂದರೆ ರೈತರನ್ನು ವಿರೋಧಿಸುತ್ತಾರೆ ಎಂದು ಅರ್ಥ.ಅವರನ್ನು ರೈತ ವಿರೋಧಿಗಳು ಎಂದು ಹೇಳಬೇಕಾಗುತ್ತದೆ’ ಎಂದು ತಿರುಗೇಟು ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.