ADVERTISEMENT

ಜೂಜು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು; ಪಿಎಸ್‌ಐ ಸೇರಿ ಮೂವರ ಅಮಾನತು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 11:39 IST
Last Updated 15 ಸೆಪ್ಟೆಂಬರ್ 2021, 11:39 IST

ಹಾವೇರಿ: ಇಸ್ಪೀಟು ಅಡ್ಡೆ ಮೇಲೆ ದಾಳಿ ನಡೆಸಿದ ನಂತರ ಪ್ರಕರಣ ದಾಖಲಿಸಿಕೊಳ್ಳದೆ ಕರ್ತವ್ಯ ಲೋಪ ಎಸಗಿದ ಪರಿಣಾಮ ಶಿಗ್ಗಾವಿ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಸೇರಿದಂತೆ ಮೂವರು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಬುಧವಾರ ಅಮಾನತುಗೊಳಿಸಿದ್ದಾರೆ.

ಸಬ್‌ಇನ್‌ಸ್ಪೆಕ್ಟರ್‌ ಕೆ.ಎನ್‌. ಹಳ್ಳಿಯವರ, ಎಎಸ್‌ಐ ಆರ್‌.ಎಚ್‌. ಸಂಗೊಳ್ಳಿ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ ಎಂ.ಎಚ್‌. ಸೂರಗೊಂಡ ಅಮಾನತುಗೊಂಡವರು.

ಶಿಗ್ಗಾವಿ ತಾಲ್ಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಸೆ.10ರಂದು ಇಸ್ಪೀಟ್‌ ಆಡುತ್ತಿದ್ದವರ ಮೇಲೆ ದಾಳಿ ನಡೆದಿತ್ತು. ಸುಮಾರು ₹8ರಿಂದ ₹9 ಲಕ್ಷ ವಶಪಡಿಸಿಕೊಂಡು, ಪ್ರಕರಣವನ್ನು ದಾಖಲಿಸಿಕೊಳ್ಳದ ಬಗ್ಗೆ ಸಾರ್ವಜನಿಕರು ಎಸ್ಪಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಕಾಯ್ದಿರಿಸಿ, ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.