ADVERTISEMENT

ಹಿರೇಹಳ್ಳಿ: ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 2:50 IST
Last Updated 2 ನವೆಂಬರ್ 2025, 2:50 IST
ಶಾಸಕ ಬಸವರಾಜ ಶಿವಣ್ಣನವರ
ಶಾಸಕ ಬಸವರಾಜ ಶಿವಣ್ಣನವರ   

ಬ್ಯಾಡಗಿ: ಪಟ್ಟಣದ ಎಸ್‌ಜೆಜೆಎಂ ಸರ್ಕಾರಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ತಾಲ್ಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನ..2ರಿಂದ ಏಳು ದಿನಗಳವರೆಗೆ ಆಯೋಜಿಸಿದೆ.

ನ.2ರಂದು ಸಂಜೆ 4 ಗಂಟೆಗೆ ಶಿಬಿರದ ಉದ್ಘಾಟನೆಯನ್ನು ಶಾಸಕ ಬಸವರಾಜ ಶಿವಣನ್ಣನವರ ನೆರವೇರಿಸುವರು. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್‌.ಆರ್‌.ಪಾಟೀಲ, ದ್ವಜಾರೋಹಣ ನೆರವೇರಿಸುವರು. ಉಪನ್ಯಾಸಕ ಹನುಮಂತಪ್ಪ ಪೂಜಾರ ಪ್ರತಿಜ್ಞಾ ವಿಧಿ ಬೋಧಿಸುವರು. ಮಾಜಿ ಶಾಸಕರಾದ ಸುರೇಶಗೌಡ್ರ ಪಾಟೀಲ ವಿರೂಪಾಕ್ಷಪ್ಪ ಬಳ್ಳಾರಿ, ನೆಹರೂ ಓಲೇಕಾರ, ಶಿವರಾಜ ಸಜ್ಜನರ ಪಾಲ್ಗೊಳ್ಳುವರು. ಪ್ರತಿ ದಿನ ಬೆಳಿಗ್ಗೆ ವಿದ್ಯಾರ್ಥಿಗಳಿಂದ ಯೋಗ, ಪ್ರಾರ್ಥನೆ, ಶ್ರಮದಾನ ನಡೆಯಲಿದ್ದು ಸಂಜೆ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಾಚಾರ್ಯ ಎಂ.ಎಫ್‌,ಬಂಡೆಪ್ಪನರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT