
ಪ್ರಜಾವಾಣಿ ವಾರ್ತೆಹಿರೇಕೆರೂರ: ತಾಲ್ಲೂಕಿನಲ್ಲಿ ಖಾಲಿಯಿರುವ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 27 ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೀತಾ ಬಾಳಿಕಾಯಿ ತಿಳಿಸಿದ್ದಾರೆ.
ಪಟ್ಟಣದ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಲಗತ್ತಿಸಲಾಗಿದೆ. ಆಯ್ಕೆ ಸಮಿತಿಯಿಂದ ಅನುಮೋದನೆ ಪಡೆದ ಪಟ್ಟಿಯಲ್ಲಿರುವವರ ಆಯ್ಕೆಗೆ ಆಕ್ಷೇಪಣೆಗಳಿದ್ದರೆ ಡಿ.26 ರ ಸಂಜೆ 5.30ರ ಒಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಸಂಬಂಧಪಟ್ಟ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.