ಹಿರೇಕೆರೂರು: ‘ಜನರ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಒದಗಿಸಲು ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ’ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.
ಪಟ್ಟಣದ ಚಿಕ್ಕೇರೂರ ರಸ್ತೆಯ ಕಾರ್ಮಿಕ ಭವನದ ಮುಂದೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಪಟ್ಟಣಕ್ಕೆ ಕುಡಿಯುವ ನೀರಿನ ವಿತರಣಾ ಜಾಲ ಅಳವಡಿಸುವ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
‘ಕಲುಷಿತ ನೀರು ಸೇವನೆಯಿಂದ ಅನೇಕ ರೋಗಗಳು ಉಲ್ಬಣವಾಗುತ್ತಿವೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶುದ್ಧ ಕುಡಿಯುವ ನೀರು ಒದಗಿಸುವ ಹತ್ತಾರು ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ. ಹಿರೇಕೆರೂರ ಪಟ್ಟಣಕ್ಕೆ ₹24.34 ಕೋಟಿ ಹಾಗೂ ರಟ್ಟೀಹಳ್ಳಿ ಪಟ್ಟಣಕ್ಕೆ ₹52 ಕೋಟಿ ಮೊತ್ತದ ನಿರಂತರ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಅನುಮೋದನೆ ದೊರೆತಿದೆ’ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಧಾ ಚಿಂದಿ, ಉಪಾಧ್ಯಕ್ಷ ರಾಜು ಕರಡಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಗದೀಶ ಹೊಸಮನಿ, ಮುಖ್ಯಾಧಿಕಾರಿ ಕೋಡಿ ಭೀಮರಾಯ, ಸದಸ್ಯರಾದ ಕಂಠಾಧರ ಅಂಗಡಿ, ಗುರುಶಾಂತಪ್ಪ ಎತ್ತಿನಹಳ್ಳಿ, ಮಹೇಂದ್ರ ಬಡಳ್ಳಿ, ಹನುಮಂತಪ್ಪ ಕುರುಬರ, ರಜಿಯಾ ಅಸದಿ, ಚಂದ್ರಕಲಾ ಕೋರಿಗೌಡ್ರ, ಕವಿತಾ ಹರ‍್ನಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.