
ಪ್ರಜಾವಾಣಿ ವಾರ್ತೆ
ಹಿರೇಕೆರೂರ: ‘ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡಿರುವ ಸುರಕ್ಷತಾ ಸಾಧನಗಳನ್ನು ಕಟ್ಟಡ ಕಾರ್ಮಿಕರು ಬಳಸಿಕೊಳ್ಳಬೇಕು. ಕಟ್ಟಡ ನಿರ್ಮಾಣದ ಕಾರ್ಯಗಳಲ್ಲಿ ಸುರಕ್ಷತೆ ವಹಿಸಬೇಕು’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಕಾರ್ಮಿಕರ ಸುರಕ್ಷತಾ ಸಾಧನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಮಿಕ ನೀರಿಕ್ಷಕ ದೇವೆಂದ್ರ ನಾಟಿಕರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡಿಕಟ್ಟಿ, ವಿನಯ ಪಾಟೀಲ್, ಶಂಭು ಹಂಸಭಾವಿ, ರಮ್ಯಾ ಕೆ, ಗೌಸ್ ಖವಾಸ್, ಮಂಜುನಾಥ ಕಚವಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.