
ಜೈಲು (ಪ್ರಾತಿನಿಧಿಕ ಚಿತ್ರ)
ರಾಣೆಬೆನ್ನೂರು: ಪತ್ನಿಯ ಮೇಲೆ ಹಲ್ಲೆ ಹಾಗೂ ಎರಡನೇ ಮದುವೆಯಾದ ಅಪರಾಧಕ್ಕೆ ನ್ಯಾಯಾಧೀಶ ಮಹಂತೇಶ ಭೂಸಗೋಳ್ ಅವರು ಡಿ.26 ರಂದು ಆರೋಪಿ ಶೇಖರ ಸಹದೇವಪ್ಪ ಅಂಬಿಗೇರ ಎಂಬಾತನಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ₹ 5000 ದಂಡ ಹಾಗೂ ಎರಡನೇ ಮದುವೆಯಾದ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ ಮತ್ತು ₹3000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪತ್ನಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಕ್ಕೆ ಮತ್ತು ಎರಡನೇ ಮದುವೆಯಾಗಿರುವುದರ ವಿರುದ್ಧ ಆರೋಪಿ ಶೇಖರ ಪತ್ನಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ನಗರ ಪೊಲೀಸ್ ಠಾಣೆ ಪಿಎಸ್‌ಐ ಪ್ರಭು ಕೆಳಗಿನಮನಿ ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸಹಾಯಕ ಸರ್ಕಾರಿ ವಕೀಲ ಸಂತೋಷಕುಮಾರ ಎಸ್.ಎಂ ಅವರು ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.