ADVERTISEMENT

‘ಕಳಪೆ ಬೀಜ ವಿತರಿಸಿದರೆ ಕ್ರಮ’

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 12:54 IST
Last Updated 12 ಜನವರಿ 2021, 12:54 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಮಾತನಾಡಿದರು 
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಮಾತನಾಡಿದರು    

ಹಾವೇರಿ: ಈಗಾಗಲೇ ಜಿಲ್ಲೆಗೆ ಮಂಜೂರಾಗಿರುವ ಸಂಚಾರಿ ಸಸ್ಯ ಚಿಕಿತ್ಸಾಲಯದ ಸದುಪಯೋಗವನ್ನು ಜಿಲ್ಲೆಯ ಪ್ರತಿಯೊಬ್ಬ ರೈತರು ಪಡೆದುಕೊಳ್ಳಬೇಕು ಎಂದು ಕೃಷಿ ಸಚಿವರಾದ ಬಿ.ಸಿ. ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರೈತರ ಬೆಳೆಗಳಿಗೆ ತಗುಲಿದ ಕೀಟದ ಭಾದೆ ಹಾಗೂ ಮಣ್ಣಿನ ಸಮಸ್ಯೆಗಳಿದ್ದಲ್ಲಿ 155313 ಸಂಖ್ಯೆಗೆ ಕರೆ ಮಾಡಿದಲ್ಲಿ ಈ ಸಸ್ಯ ಚಿಕಿತ್ಸಾ ವಾಹನ ಸ್ಥಳಕ್ಕೆ ಆಗಮಿಸಿ, ಪರಿಣತ ತಂಡ ಬೆಳೆಗಳ ಪರೀಕ್ಷೆ ಹಾಗೂ ಮಣ್ಣಿ ಪರೀಕ್ಷೆ ನಡೆಸಿ ಯಾವ ಪೋಷಕಾಂಶ ನೀಡಬೇಕು ಎಂದು ಮಾಹಿತಿ ನೀಡುತ್ತದೆ ಎಂದು ತಿಳಿಸಿದರು.

ಕೃಷಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಹಾಗೂ ಕೃಷಿ ಬಗ್ಗೆ ಸಮಗ್ರ ಮಾಹಿತಿಯುಳ್ಳ ಜಾಹೀರಾತುಗಳ ಮೂಲಕ ರೈತರಿಗೆ ಮಾಹಿತಿ ನೀಡಬೇಕು. ಜೊತೆಗೆ ಕೃಷಿ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಇಳುವರಿ ಪಡೆದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಹೊಸದಾಗಿ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಪೂರೈಕೆ ಅಂಗಡಿ ಆರಂಭಿಸುವ ಪೂರ್ವದಲ್ಲಿ 15 ದಿನಗಳ ತರಬೇತಿ ಪಡೆಯುವುದು ಕಡ್ಡಾಯವಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಕರು ಕಳಪೆ ಗುಣಮಟ್ಟದ ಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಿಸಿದರೆ ಅಂತರ ಕಾನೂನು ರೀತಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟವಾಗದಂತೆ ಎಂದು ಸಂಬಂಧಟಪ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ವಸಹಿಸಬೇಕು ಸೂಚನೆ ನೀಡಿದರು.

ಕೃಷಿ ಚಟುವಟಿಕೆಗೆ ಸಂಬಂಧಿಸಿ ಯೋಜನೆಗಳಿಗೆ ಸರ್ಕಾರದ ಸಿಗುವ ಸಬ್ಸಿಡಿ ಹಾಗೂ ಮೂಲ ದರದ ಕುರಿತು ರೈತರಿಗೆ ಸಮರ್ಪಕ ಮಾಹಿತಿ ನೀಡುವ ಕೆಲಸವನ್ನು ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ನೆಹರು ಓಲೇಕಾರ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.