ADVERTISEMENT

ಅಕ್ರಮ ದಾಸ್ತಾನು: 254 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 20 ಮೇ 2020, 11:30 IST
Last Updated 20 ಮೇ 2020, 11:30 IST
ಹಾವೇರಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಂಡ ಅಧಿಕಾರಿಗಳ ತಂಡ
ಹಾವೇರಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಂಡ ಅಧಿಕಾರಿಗಳ ತಂಡ   

ಹಾವೇರಿ: ಹಾನಗಲ್‌ ರಸ್ತೆಯಲ್ಲಿರುವ ಎಪಿಎಂಸಿ ಆವರಣದ ಸಿದ್ಧಲಿಂಗೇಶ್ವರ ಟ್ರೇಡರ್ಸ್‌ ಗೋದಾಮಿನ ಮೇಲೆ ದಾವಣಗೆರೆಯ ಐಜಿ ಸ್ಕ್ವಾಡ್‌ ಮತ್ತು ಹಾವೇರಿ ಆಹಾರ ಇಲಾಖೆ ಅಧಿಕಾರಿಗಳು ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ದಾಸ್ತಾನು ಮಾಡಿದ್ದ 254 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

₹3.80 ಲಕ್ಷ ಮೌಲ್ಯದ ‘ಅನ್ನಭಾಗ್ಯ’ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಐಜಿ ಸ್ಕ್ವಾಡ್ ಪಿಎಸ್ಐ ಸಿದ್ದಾರೂಢ ಬಡಿಗೇರ ಮತ್ತು ಆಹಾರ ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಿಕೆ ನೇತೃತ್ವದಲ್ಲಿ ದಾಳಿ ನಡೆಯಿತು.

ಗೋದಾಮಿನ ಮಾಲೀಕ ಶಿವಯೋಗಿ ಪಟ್ಟಣಶೆಟ್ಟಿ, ಸಹಾಯಕ ರವಿ ನಾಗನೂರ ಹಾಗೂ ಲಾರಿ ಚಾಲಕ ಶಿವ ಕರುಗಲ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.