
ಪ್ರಜಾವಾಣಿ ವಾರ್ತೆ
ಹಾವನೂರ ಗ್ರಾಮದ ತುಂಗಭದ್ರ ನದಿಯ ದಡದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಮರಳು ವಶಪಡಿಸಿಕೊಂಡರು
ಗುತ್ತಲ: ಇಲ್ಲಿಗೆ ಸಮೀಪದ ಹಾವನೂರ ಗ್ರಾಮದ ಶಾಕಾರ ಗ್ರಾಮಕ್ಕೆ ಹೋಗುವ ಮಾರ್ಗದ ತುಂಗಭದ್ರ ನದಿಯ ದಡದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪಿಎಸ್‌ಐ ಬಸವರಾಜ ಬಿರದಾರ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಶಬ್ಬಿರಹ್ಮದ ದಿಡಗೂರ ಸೋಮವಾರ ದಾಳಿ ಮಾಡಿ 12 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.