ADVERTISEMENT

ಅಕ್ರಮ ಸಾಗಣೆ: ₹16 ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 13:35 IST
Last Updated 28 ಮಾರ್ಚ್ 2023, 13:35 IST
ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್‌ ನಾಕಾ ಚೆಕ್‌ಪೋಸ್ಟ್‌ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ₹16 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡರು 
ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್‌ ನಾಕಾ ಚೆಕ್‌ಪೋಸ್ಟ್‌ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ₹16 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡರು    

ಹಾವೇರಿ: ದಾಖಲೆ ಇಲ್ಲದೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹16 ಲಕ್ಷ ನಗದನ್ನು ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಾಗಿದೆ.

ಹಾವೇರಿ ನಗರದ ಕೊಂಡವಾಡ ಗಲ್ಲಿ ನಿವಾಸಿ ನಟರಾಜ ಬಾಳಿಮಠ (44) ಮತ್ತು ಶ್ರೀಕಂಠಯ್ಯ ಬಾಳಿಮಠ (40) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿಗ್ಗಾವಿ ಕಡೆಯಿಂದ ಹಾವೇರಿ ಕಡೆಗೆ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಕಾರಿನಲ್ಲಿ ಮಂಗಳವಾರ ಸಾಗಿಸುತ್ತಿದ್ದ ವೇಳೆ ಬಂಕಾಪುರ ಟೋಲ್‌ ಪ್ಲಾಜಾ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.