ADVERTISEMENT

ಕಸ ವಿಲೇವಾರಿ ಸಮಸ್ಯೆಗೆ ತಿಲಾಂಜಲಿ: ಶಾಸಕ ನೆಹರು ಓಲೇಕಾರ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 16:10 IST
Last Updated 1 ಜುಲೈ 2021, 16:10 IST
ಮನೆ–ಮನೆಯಿಂದ ಕಸ ವಿಲೇವಾರಿ ಮಾಡುವ ನಗರಸಭೆಯ ಹೊಸ ಟಿಪ್ಪರ್‌ಗಳಿಗೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದಾರೆ 
ಮನೆ–ಮನೆಯಿಂದ ಕಸ ವಿಲೇವಾರಿ ಮಾಡುವ ನಗರಸಭೆಯ ಹೊಸ ಟಿಪ್ಪರ್‌ಗಳಿಗೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದಾರೆ    

ಹಾವೇರಿ: ‘ನಗರಸಭೆಗೆ 11 ಹೊಸ ಟಿಪ್ಪರ್‌ಗಳು ಬಂದಿದ್ದು, ಹಳೆಯ ಎರಡು ವಾಹನ ಸೇರಿ ಒಟ್ಟು 13 ಟಿಪ್ಪರ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸಲಿವೆ. ಕಸ ವಿಲೇವಾರಿ ಕಾರ್ಯ ವೇಗ ಪಡೆದುಕೊಳ್ಳಲಿದೆ’ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರಸಭೆ ಆವರಣದಲ್ಲಿ ಗುರುವಾರ 11 ಹೊಸ ಟಿಪ್ಪರ್‌ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ನಗರದಲ್ಲಿ ಕಸದ ಸಮಸ್ಯೆ ತೀವ್ರವಾಗಿತ್ತು. ಮನೆ–ಮನೆಯಿಂದ ಕಸ ಸಂಗ್ರಹಿಸುವುದು ತಡವಾಗುತ್ತಿದೆ ಎಂಬ ದೂರು ಕೇಳಿ ಬರುತ್ತಿದ್ದವು. ಇನ್ನು ಮುಂದೆ ಸ್ವಚ್ಛತಾ ಆಂದೋಲನ ಆರಂಭವಾಗಲಿದೆ. ಕಸದ ಸಮಸ್ಯೆಗೆ ತಿಲಾಂಜಲಿ ಆಡಲಿದ್ದೇವೆ’ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ,‘ನಮ್ಮ ಊರು ನಮ್ಮ ಹೊಣೆ’ ಎಂಬ ಅಭಿಯಾನಕ್ಕೆ ನಗರದ ಎಲ್ಲ ಜನರು ಸಹಕಾರ ನೀಡಬೇಕು.11 ಹೊಸ ಟಿಪ್ಪರ್‌ಗಳಿಗೆ ಚಾಲನೆ ನೀಡಿದ್ದು, ಮನೆ–ಮನೆ ಕಸ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ 3 ಟ್ರ್ಯಾಕ್ಟರ್‌ಗಳನ್ನೂ ಕಸ ವಿಲೇವಾರಿಗೆ ಮೀಸಲಿಡುತ್ತೇವೆ. ಹಸಿ ಕಸ ಮತ್ತು ಒಣಕಸವನ್ನು ಪ್ರತ್ಯೇಕವಾಗಿ ನೀಡುವ ಮೂಲಕ ಜನರು ನಗರದ ನೈರ್ಮಲ್ಯ ಕಾಪಾಡಬೇಕು ಎಂದು ಮನವಿ ಮಾಡಿದರು.

ADVERTISEMENT

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ನಗರಸಭೆ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.