ADVERTISEMENT

ಬ್ಯಾಡಗಿ: ಮೆಣಸಿನಕಾಯಿ ಆವಕದಲ್ಲಿ ಹೆಚ್ಚಳ, ಬೆಲೆಯಲ್ಲಿ ತುಸು ಇಳಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2025, 15:40 IST
Last Updated 21 ಏಪ್ರಿಲ್ 2025, 15:40 IST
<div class="paragraphs"><p>ಬ್ಯಾಡಗಿ ಮೆಣಸಿನಕಾಯಿ</p></div>

ಬ್ಯಾಡಗಿ ಮೆಣಸಿನಕಾಯಿ

   

ಬ್ಯಾಡಗಿ: ಇಲ್ಲಿಯ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಸೋಮವಾರ 1,34,885 ಚೀಲ (33,721 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳವಾಗಿದೆ. ಆದರೆ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ.

ಕಳೆದ ಗುರುವಾರ ಮಾರುಕಟ್ಟೆಗೆ 1,04,233 ಚೀಲ (26,058 ಕ್ವಿಂಟಲ್‌) ಮೆಣಸಿನಕಾಯಿ ಆವಕವಾಗಿತ್ತು. ಭಾನುವಾರ ಸಂಜೆ ಸುರಿದ ದಿಢೀರ್‌ ಮಳೆಯಿಂದ ಮೆಣಸಿನಕಾಯಿ ಚೀಲಗಳಲ್ಲಿ ತೇವಾಂಶ ಹೆಚ್ಚಿದ ಹಿನ್ನೆಲೆಯಲ್ಲಿ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ.

ADVERTISEMENT

ಕಳೆದ ವಾರ ಎರಡು ದಿನ ಸರ್ಕಾರಿ ರಜೆ ಘೋಷಣೆಯಾಗಿದ್ದರಿಂದ ಒಟ್ಟಾರೆ 2,32,420 ಚೀಲ (58,105 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟವಾದಂತಾಗಿದೆ. ಸೋಮವಾರ ಮಾರುಕಟ್ಟೆಗೆ 11,674 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 452 ಲಾಟ್‌ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ.

38 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹24,009 ರಂತೆ, 24 ಚೀಲ ಕಡ್ಡಿ ಮೆಣಸಿನಕಾಯಿ ₹21,499 ರಂತೆ ಹಾಗೂ ಗುಂಟೂರು ತಳಿ ಮೆಣಸಿನಕಾಯಿ ₹12,529 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ₹20,509, ಬ್ಯಾಡಗಿ ಕಡ್ಡಿ ಮೆಣಸಿನಕಾಯಿ ₹19,009 ಹಾಗೂ ಗುಂಟೂರ ತಳಿ ₹11,259ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 322 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.