ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ 1,29,473 ಚೀಲ (32,368 ಕ್ವಿಂಟಲ್ ) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ದಿಢೀರ್ ಹೆಚ್ಚಳವಾಗಿದೆ.
ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ಒಟ್ಟಾರೆ 1,40,952 ಚೀಲ (35,238 ಕ್ವಿಂಟಲ್) ಮೆಣಸಿನಕಾಯಿ ಮಾರಾಟವಾಗಿವೆ. ಸೋಮವಾರ ಮಾರುಕಟ್ಟೆಗೆ 17,932 ಲಾಟ್ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 699 ಲಾಟ್‌ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ.
9 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹42,399ರಂತೆ, 3 ಚೀಲ ಕಡ್ಡಿ ಮೆಣಸಿನಕಾಯಿ ₹35,559ರಂತೆ, ಗುಂಟೂರ ತಳಿ ಮೆಣಸಿನಕಾಯಿ ₹16,759ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ.
ಸರಾಸರಿ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ಬ್ಯಾಡಗಿ ಡಬ್ಬಿ ₹30,009, ಕಡ್ಡಿ ₹28,959 ಹಾಗೂ ಗುಂಟೂರ ತಳಿ ₹15,509ರಂತೆ ಮಾರಾಟವಾಗಿವೆ.
ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 379 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.
ಸೋಮವಾರದ ಮಾರುಕಟ್ಟೆ ದರ
ಬ್ಯಾಡಗಿ ಕಡ್ಡಿ;₹2,959–₹35,559
ಬ್ಯಾಡಗಿ ಡಬ್ಬಿ;₹3,169–₹42,399
ಗುಂಟೂರ ತಳಿ;₹1,009–₹16,759
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.