ADVERTISEMENT

ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಿಸಿ: ಎಸ್. ಸುರೇಶಕುಮಾರ್‌

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 14:31 IST
Last Updated 1 ಜುಲೈ 2021, 14:31 IST
ಎಸ್‌.ವಿ. ಸಂಕನೂರ, ವಿಧಾನ ಪರಿಷತ್‌ ಸದಸ್ಯ 
ಎಸ್‌.ವಿ. ಸಂಕನೂರ, ವಿಧಾನ ಪರಿಷತ್‌ ಸದಸ್ಯ    

ಹಾವೇರಿ: ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಉಪನ್ಯಾಸಕರು ಹಲವಾರು ವರ್ಷಗಳಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಅತಿಥಿ ಉಪನ್ಯಾಸಕರಿಗೆ ಕಳೆದ ನಾಲ್ಕು ವರ್ಷಗಳಿಂದ ಗೌರವ ಸಂಭಾವನೆಯನ್ನು ಹೆಚ್ಚಿಸಿರುವುದಿಲ್ಲ. ಹಾಗಾಗಿ ಅವರಿಗೆ ₹ 9000-12000 ರವರೆಗೆ ಹೆಚ್ಚಿಸಲು ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ ಅವರು ಶಿಕ್ಷಣ ಸಚಿವರಾದ ಎಸ್. ಸುರೇಶಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

2021ರ ಏಪ್ರಿಲ್‌ನಲ್ಲಿ ಕರ್ತವ್ಯದಿಂದ ಬಿಡುಗಡೆ ಮಾಡಿದ ಅರೆಕಾಲಿಕ ಉಪನ್ಯಾಸಕರ ಆದೇಶವನ್ನು ಹಿಂಪಡೆದು ಪುನಃ ಕರ್ತವ್ಯಕ್ಕೆ ಹಾಜರಾಗಲು ಮರು ಆದೇಶ ಮಾಡಲು ಮತ್ತು ಅವರಿಗೆ ಸೇವಾ ಭದ್ರತೆ ನೀಡಲು ಒತ್ತಾಯಿಸಿದರು.

ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ನೌಕರರು ಕ್ಯಾನ್ಸರ್ ಕಾಯಿಲೆಯಿಂದ ಬಳಲಿದವರಿಗೆ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯಲು ಸರಕಾರ ವಿಶೇಷ ಸಾಂಧರ್ಭಿಕ ರಜೆ ಮಂಜೂರು ಮಾಡಿದೆ. ಅದರಂತೆ ಅನುದದಾನಿತ ಶಾಲಾ ಕಾಲೇಜುಗಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಗೂ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನು ವಿಸ್ತರಿಸಲು ಒತ್ತಾಯಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.