ಶಿಗ್ಗಾವಿಯ ಹೊಸ ಬಸ್‌ನಿಲ್ದಾಣ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಅಪೂರ್ಣಗೊಂಡಿದೆ
ಶಿಗ್ಗಾವಿ: ಬಡವರಿಗೆ, ನಿರ್ಗತಿಕರ ಹಸಿವು ನಿಗಸುವ ಉದ್ದೇಶದಿಂದ ಇಲ್ಲಿನ ಹೊಸ ಬಸ್‌ನಿಲ್ದಾಣದಲ್ಲಿ ನಿರ್ಮಿಸುತ್ತಿರುವ ಇಂದಿರಾ ಕ್ಯಾಂಟೀನ್ ಎರಡು ವರ್ಷಗಳಿಂದ ಕುಂಟುತ್ತಾ ಸಾಗಿದೆ.
2013ರಲ್ಲೇ ಸರ್ಕಾರ ಈ ಯೋಜನೆಯನ್ನು ರಾಜ್ಯದಾದ್ಯಂತ ಅನುಷ್ಠಾನಕ್ಕೆ ತಂದರೂ, ಶಿಗ್ಗಾವಿ ಕ್ಷೇತ್ರದಲ್ಲಿ ಆರಂಭವಾಗಿಲ್ಲ. ಇದರಿಂದಾಗಿ ಇಂದಿರಾ ಕ್ಯಾಂಟೀನ್ ಆರಂಭವಾಗುವ ಬಡವರ ಕನಸು ನನಸಾಗಲಿಲ್ಲ.
ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಆಗಮಿಸಿದಾಗ, ಅಪೂರ್ಣಗೊಂಡಿದ್ದ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈವರೆಗೂ ಪೂರ್ಣಗೊಂಡಿಲ್ಲ. ಹೀಗಾಗಿ ಬಡವರು, ನಿರ್ಗತಿಕರು ಆಹಾರಕ್ಕಾಗಿ ಪರದಾಡುವಂತಾಗಿದೆ.
ಕ್ಯಾಂಟೀನ್ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಕಿಟಕಿಗಳು ಒಡೆದುಹೋಗಿವೆ. ಸರಿಯಾದ ಬಾಗಿಲು ಇಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಮದ್ಯದ ಬಾಟಲಿ, ಪಾಕೀಟು, ಪ್ಲಾಸ್ಟಿಕ್ ಚೀಲಗಳು ತುಂಬಿವೆ. ಕ್ಯಾಂಟೀನ್ ಒಳಗೆ ಹಾಗೂ ಹೊರಗೆ ಗಬ್ಬುವಾಸನೆ ಹರಡಿದೆ.
ಕ್ಯಾಂಟೀನ್ ಸುತ್ತ ಗಿಡ ಗಂಟಿ ಬೆಳೆದಿದೆ. ಪ್ರಯಾಣಿಕರು, ಸಾರ್ವಜನಿಕರು ಕ್ಯಾಂಟೀನ್ ಬಳಿ ಮಲ–ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ರೋಗ ಹರಡುವ ಭೀತಿ ಸ್ಥಳೀಯರಲ್ಲಿದೆ. ಕ್ಯಾಂಟೀನ್ ಸುತ್ತ ಹಾಗೂ ಇಡೀ ಬಸ್‌ನಿಲ್ದಾಣವನ್ನು ಸ್ವಚ್ಛಗೊಳಿಸವೇಕು. ಇಂದಿರಾ ಕ್ಯಾಂಟೀನ್ ಅನ್ನು ಶೀಘ್ರ ಆರಂಭಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಾರೆ.
ಇಂದಿರಾ ಕ್ಯಾಂಟೀನ್ ಕಟ್ಟಡದ ಸಣ್ಣಪುಟ್ಟ ಕೆಲಸವಿದ್ದು ಸದ್ಯದಲ್ಲೇ ಪೂರ್ಣಗೊಳಿಸಿ ಕ್ಯಾಂಟೀನ್ ಆರಂಭಿಸಲಾಗುತ್ತಿದೆ.ಮಲ್ಲೇಶ ಆರ್. ಶಿಗ್ಗಾವಿ, ಪುರಸಭೆ ಮುಖ್ಯಾಧಿಕಾರಿ
ಸರ್ಕಾರದ ಯೋಜನೆ ಸದ್ಬಳಕೆ ಆಗಬೇಕು. ಕ್ಯಾಂಟೀನ್ ಆರಂಭಿಸಿ ಬಡ ಕೂಲಿಕಾರರಿಗೆ ಅನುಕೂಲ ಮಾಡಿಕೊಡಬೇಕು.ಬಸಲಿಂಗಪ್ಪ ನರಗುಂದ, ರೈತ ಸಂಘದ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.