ADVERTISEMENT

ಹಾವೇರಿಯ ರಟ್ಟೀಹಳ್ಳಿಯಲ್ಲಿ ಕೊರೊನಾ ವೈರಸ್‌ ಸೋಂಕಿತ ಯುವಕ ನಾಪತ್ತೆ: ಹುಡುಕಾಟ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 14:41 IST
Last Updated 5 ಜುಲೈ 2020, 14:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಹಾವೇರಿ: ರಟ್ಟೀಹಳ್ಳಿ ತಾಲ್ಲೂಕಿನ ಪರ್ವತಶಿದ್ಗೇರಿ ಗ್ರಾಮದಲ್ಲಿ 28 ವರ್ಷದ ಕೋವಿಡ್‌ ಸೋಂಕಿತ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.

ಐದು ದಿನಗಳ ಹಿಂದೆ ಬೆಂಗಳೂರಿನಿಂದ ಸ್ವ–ಗ್ರಾಮಕ್ಕೆ ಬಂದಿದ್ದ ಯುವಕನನ್ನು ಗ್ರಾಮಸ್ಥರು ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳುವಂತೆ ಹೇಳಿದ್ದರು. ಹೀಗಾಗಿ ರಟ್ಟೀಹಳ್ಳಿ ಸರ್ಕಾರಿ ಆಸ್ಪತ್ರೆಗೆ ಹೋಗಿ ಗಂಟಲು ದ್ರವವನ್ನು ಪರೀಕ್ಷೆಗೆ ಕೊಟ್ಟು ಯುವಕ ಮನೆಗೆ ಬಂದಿದ್ದ.

ಭಾನುವಾರ ಯುವಕನ ವರದಿ ‘ಪಾಸಿಟಿವ್‌’ ಬಂದ ಕಾರಣ, ಸೋಂಕಿತನನ್ನು ಕರೆತರಲು ವೈದ್ಯಕೀಯ ಸಿಬ್ಬಂದಿ ಆತನ ಮನೆಗೆ ಹೋಗಿದ್ದರು. ಆದರೆ ಯುವಕ ನಾಪತ್ತೆಯಾಗಿರುವುದು ಗೊತ್ತಾಗಿದೆ. ಸೋಂಕಿತನಿಗಾಗಿ ರಟ್ಟೀಹಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ADVERTISEMENT

ಸೋಂಕಿತ ಸಿಗದಿದ್ದರೆ ಆತನ ವಿರುದ್ಧ ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್‌ ಕೆ.ಗುರುಬಸವರಾಜ ಅವರು ರಟ್ಟೀಹಳ್ಳಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.