ADVERTISEMENT

ಮಾಜಿ ಸ್ವೀಕರ್‌ ಕೆ. ಬಿ.ಕೋಳವಾಡ ನಿವಾಸದ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 8:56 IST
Last Updated 4 ಡಿಸೆಂಬರ್ 2019, 8:56 IST
   

ರಾಣೆಬೆನ್ನೂರು: ಉಪ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರ ವಾಗೀಶನಗರದ ಕಾಂಗ್ರೆಸ್‌ ಕಚೇರಿ ಮತ್ತು ವಾಸದ ಮನೆಮೇಲೆ ಐಟಿ ಮತ್ತು ಅಬಕಾರಿ ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಮತ್ತು ಮದ್ಯ ದಾಸ್ತಾನು ಇರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಐಟಿ ಅಧಿಕಾರಿಗಳ ದಾಳಿ ವಿರೋಧಿಸಿಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT