ADVERTISEMENT

ಕನಕದಾಸರ ಜಯಂತಿ: ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 8:12 IST
Last Updated 4 ಡಿಸೆಂಬರ್ 2020, 8:12 IST
ಹಾವೇರಿಯ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಇದ್ದಾರೆ (ಎಡಚಿತ್ರ), ರಾಣೆಬೆನ್ನೂರಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಕನಕದಾಸರ 533ನೇ ಜಯಂತಿ ಆಚರಿಸಲಾಯಿತು
ಹಾವೇರಿಯ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಇದ್ದಾರೆ (ಎಡಚಿತ್ರ), ರಾಣೆಬೆನ್ನೂರಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಕನಕದಾಸರ 533ನೇ ಜಯಂತಿ ಆಚರಿಸಲಾಯಿತು   

ಹಾವೇರಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಯೋಗದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್‌, ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಡಿಡಿಪಿಐ ಅಂದಾನಪ್ಪ ವಡಗೇರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ, ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.