
ಹಿರೇಕೆರೂರ: ‘ಸಂಘಟನೆಗಳ ಬಲವರ್ಧನೆ ಹಾಗೂ ಕಾರ್ಯಚಟುವಟಿಕೆಗಳಿಗೆ ಮೂಲಸೌಕರ್ಯ ಒದಗಿಸಿದಾಗ ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಅನಕೂಲವಾಗುತ್ತದೆ’ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.
ಪಟ್ಟಣದ ಮುಳುಗುಂದ ಪ್ಲಾಟ್‌ನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ತಾಲ್ಲೂಕು ಘಟಕದ ನೂತನ ಕಟ್ಟಡ ನಿರ್ಮಾಣಕ್ಕೆ ಈಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಕನ್ನಡ ಸಾಹಿತ್ಯ ಪರಿಷತ್ತಿನ ಹಿರೇಕೆರೂರ ತಾಲ್ಲೂಕು ಘಟಕ ಕ್ರಿಯಾಶೀಲವಾಗಿದೆ. ಈ ಭವನ ನಿರ್ಮಾಣಕ್ಕೆ ವೈಯಕ್ತಿಕವಾಗಿ ₹1ಲಕ್ಷ ಹಾಗೂ ಶಾಸಕರ ಸ್ಥಳೀಯ ಕ್ಷೇತ್ರಾಭಿವೃದ್ಧಿಯಲ್ಲಿ ₹10 ಲಕ್ಷ ನೀಡುವೆ. ಎಲ್ಲರ ಸಹಕಾರದಿಂದ ಕಸಾಪ ಕಟ್ಟಡ ನಿರ್ಮಾಣ ಶೀಘ್ರ ಮುಕ್ತಾಯಗೊಳ್ಳಲಿ’ ಎಂದು ಆಶಿಸಿದರು.
ಸರ್ವಜ್ಞ ಸ್ಮಾರಕ ಸಮಿತಿ ಅಧ್ಯಕ್ಷ ಎಸ್.ಎಸ್.ಪಾಟೀಲ, ಕಸಾಪ ನೂತನ ಕಟ್ಟಡ ನಿರ್ಮಾಣಕ್ಕೆ ವೈಯಯಕ್ತಿಕವಾಗಿ ₹10 ಲಕ್ಷ ನೀಡುವುದಾಗಿ ವಾಗ್ದಾನ ಮಾಡಿದರು.
ಇದೇ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಿದ ಬುರಡೀಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಮತ್ತು ಪಿಡಿಒ ಅವರನ್ನು ಸನ್ಮಾನಿಸಲಾಯಿತು.
ಮಾಜಿ ಸಚಿವ ಬಿ.ಸಿ.ಪಾಟೀಲ, ಮಾಜಿ ಶಾಸಕ ಬಿ.ಎಚ್.ಬನ್ನಿಕೊಡ, ಮಾಜಿ ಮುಖ್ಯ ಸಚೇತಕ ಡಿ.ಎಂ.ಸಾಲಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ಬುರಡೀಕಟ್ಟಿ ಗ್ರಾ.ಪಂ ಅಧ್ಯಕ್ಷ ರಮೇಶ ಮೇಗಳಮನಿ, ಉಪಾಧ್ಯಕ್ಷೆ ಪುಷ್ಪಾ ಶಿರಿಗೌಡ್ರ, ಕಸಾಪ ತಾಲ್ಲೂಕು ಘಟಕದ ಗೌರವ ಕೋಶಾಧ್ಯಕ್ಷ ಮಹೇಂದ್ರ ಬಡಳ್ಳಿ, ತಾಲ್ಲೂಕು ಅಧ್ಯಕ್ಷ ಎನ್.ಸುರೇಶಕುಮಾರ, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.