ADVERTISEMENT

ಹಾವೇರಿ | NWKRTC ಬಸ್ ಅಪಘಾತ: 23 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 15:17 IST
Last Updated 6 ಜೂನ್ 2025, 15:17 IST
   

ಶಿಗ್ಗಾವಿ (ಹಾವೇರಿ ಜಿಲ್ಲೆ): ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಕರಸಾಸಂ (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಬಸ್ ಅಪಘಾತವಾಗಿದ್ದು, ಬಸ್‌ನಲ್ಲಿದ್ದ 23 ಮಂದಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ–ಹಾನಗಲ್‌ ಮಾರ್ಗದ ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಹೆದ್ದಾರಿಯಲ್ಲಿ ಹೊರಟಿದ್ದ ಬಸ್‌ ಏಕಾಏಕಿ, ರಸ್ತೆ ವಿಭಜಕಕ್ಕೆ ಗುದ್ದಿತ್ತು. ನಂತರ, ರಸ್ತೆ ಪಕ್ಕದ ತಗ್ಗಿನಲ್ಲಿ ಹೋಗಿ ಬಿದ್ದಿದೆ. ಅಪಘಾತದ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಾಯಾಳುಗಳನ್ನು ಶಿಗ್ಗಾವಿ ತಾಲ್ಲೂಕು ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕೆಎಂಸಿ–ಆರ್‌ಐ (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಆರೋಗ್ಯ ಚಿಂತಾಜನಕವಾಗಿದೆ.

ADVERTISEMENT

ಅಪಘಾತ ನೋಡಿದ ಜನರೇ ಸ್ಥಳಕ್ಕೆ ಹೋಗಿ, ಬಸ್‌ನಿಂದ ಪ್ರಯಾಣಿಕರನ್ನು ಹೊರಗೆ ಕರೆತಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಪಘಾತದ ಬಗ್ಗೆ ಶಿಗ್ಗಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.