ಹಾವೇರಿ: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ಅನಾರೋಗ್ಯದಿಂದಾಗಿ ಗೃಹಲಕ್ಷ್ಮಿ ಯೋಜನೆಯ ಕಂತುಗಳು ಬಾಕಿ ಉಳಿದಿವೆ. ಗ್ಯಾರಂಟಿ ಯೋಜನೆಗಳಲ್ಲಿರುವ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಕಂತುಗಳು ಸದ್ಯದಲ್ಲೇ ಪಾವತಿ ಮಾಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.