ADVERTISEMENT

ಶ್ಯಾಬಳ ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ಜಮೀನು ರಸ್ತೆ: ಈಗ ಸಂಚಾರ ಸುಗಮ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 3:00 IST
Last Updated 2 ಜನವರಿ 2026, 3:00 IST
ಶಿಗ್ಗಾವಿ ತಾಲ್ಲೂಕಿನ ಶ್ಯಾಬಳ ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ಜಮೀನು ರಸ್ತೆಗೆ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು 
ಶಿಗ್ಗಾವಿ ತಾಲ್ಲೂಕಿನ ಶ್ಯಾಬಳ ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ಜಮೀನು ರಸ್ತೆಗೆ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು    

ಶಿಗ್ಗಾವಿ: ತಾಲ್ಲೂಕಿನ ಶ್ಯಾಬಳ ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ಜಮೀನು ದಾರಿಯನ್ನು ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಈಚೆಗೆ ಸುಗಮಗೊಳಿಸಿದರು.

ಗ್ರಾಮದ ರೈತ ಚನ್ನಮಲ್ಲಯ್ಯ ಶಂಕರಯ್ಯ ಹಿರೇಮಠ ಹಾಗೂ ಪ್ರಭು ಶಂಕ್ರಪ್ಪ ದೊಡ್ಮನಿ ಅವರಿಗೆ ಸೇರಿದ  ಜಮೀನಿನ ದಾರಿ ಕಳೆದ 5 ವರ್ಷಗಳಿಂದ ದಾರಿ ವಹಿವಾಟು ಹಕ್ಕನ್ನು ನಿರಾಕರಿಸಲಾಗಿತ್ತು.  

ರೈತರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮದ ಹಿರಿಯರ ಸಮಕ್ಷಮದಲ್ಲಿ ರೈತರ ಸಮಸ್ಯೆ ಬಗೆಹರಿಸಲಾಯಿತು.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.