ನರಹರಿ ಕಟ್ಟಿ
ಶಿಗ್ಗಾವಿ: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಅನ್ಯಕೋಮಿನ ಕೆಲ ಯುವಕರು ಗಣಪತಿಯ ಮೇಲೆ ಕಲ್ಲು ತೂರಿದಾಗ, ಆ ಘಟನೆಗೆ ವಿರೋಧವಾಗಿ ಪ್ರತಿಭಟಿಸಿದ ಹಿಂದೂಗಳನ್ನು ಬಂಧಿಸಿ, ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನರಹರಿ ಕಟ್ಟಿ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನನೆಗುದಿಗೆ ಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ. ತಕ್ಷಣ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.
ಬಂಧಿತರನ್ನು ಬಿಡುಗಡೆ ಮಾಡಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.